ಬೆಂಗಳೂರು, ಜು 19 (DaijiworldNews/AK): ನಗರದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಭಿನಂದನೆಗಳು ತಿಳಿಸಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ.
ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.