ಬೆಂಗಳೂರು, ಜು 20 (DaijiworldNews/HR): ವಿಧಾನಸಭೆ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ವೀಕರ್ ಅಮಾನತು ಮಾಡಿದ್ದು, ಈ ಸಂಬಂಧ ರಾಜ್ಯಪಾಲ ಗೆಹ್ಲೋಟ್ಗೆ ವಿಧಾನಸೌಧದಿಂದ ರಾಜಭವನದವರೆಗೂ ಪಾದಯಾತ್ರೆ ಮೂಲಕ ಹೋಗಿ ದೂರು ನೀಡಲು ಬಿಜೆಪಿ ಶಾಸಕರು ತೀರ್ಮಾನಿಸಿದ್ದಾರೆ.
ನಾಳೆ ಉಭಯ ಕಲಾಪ ಬಹಿಷ್ಕರಿಸಲು ಬಿಜೆಪಿ ನಿರ್ಧಾರ ಮಾಡಿದ್ದು, ಈ ಬಗ್ಗೆ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಎಂಎಲ್, ಎಂಎಲ್ಸಿಗಳ ಸಭೆಯಲ್ಲಿ ತೀರ್ಮಾನವಾಗಿದೆ.
ಇನ್ನು ಕಲಾಪವನ್ನು ಬಹಿಷ್ಕರಿಸಿ ಬಿಜೆಪಿ ಶಾಸಕರು ಪ್ರತಿಭಟನೆಗಿಳಿದಿದ್ದು, ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ನಾಯಕರ ಪ್ರತಿಭಟನೆ ಮಾಡುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.