ನವದೆಹಲಿ, ಜು 20 (DaijiworldNews/HR): ಮಣಿಪುರದಲ್ಲಿ ಎರಡು ತಿಂಗಳ ಹಿಂದೆ ಜನಾಂಗೀಯ ಹಿಂಸಾಚಾರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ 140 ಕೋಟಿ ಭಾರತೀಯರನ್ನು ನಾಚಿಕೆಪಡಿಸಿದ್ದು, ಇದನ್ನು ಕ್ಷಮಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಮೋದಿ, ಕಾನೂನು ತನ್ನ ಪೂರ್ಣ ಶಕ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಮತ್ತು ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದರು.
ಇನ್ನು ಮಣಿಪುರದಲ್ಲಿ ಬೆಳಕಿಗೆ ಬಂದಿರುವ ಘಟನೆ ಯಾವುದೇ ನಾಗರಿಕ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದ್ದು, ಮಣಿಪುರದ ಹೆಣ್ಣುಮಕ್ಕಳಿಗೆ ಆದ ಘಟನೆಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಮತ್ತು ಮಹಿಳೆಯರ ಸುರಕ್ಷತೆಗಾಗಿ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಮುಖ್ಯಮಂತ್ರಿಗಳನ್ನು ಪ್ರಧನಿ ಮೋದಿ ಒತ್ತಾಯಿಸಿದ್ದಾರೆ.