ಇಂಫಾಲ್, ಜು 20 (DaijiworldNews/HR): ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಆಘಾತಕಾರಿ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದ್ದು, ಓರ್ವ ಮಹಿಳೆಯ ಸಹೋದರನ್ನು ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆರವಣಿಗೆಯ ವೀಡಿಯೋದಲ್ಲಿ ಆರೋಪಿ ಹಸಿರು ಟಿ ಶರ್ಟ್ ಧರಿಸಿದ್ದು, ಇದೇ ವೀಡಿಯೋ ಸಹಾಯದಿಂದ ತೌಬಲ್ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವುದು ಇಂಟರ್ನೆಟ್ನಲ್ಲಿ ಬುಧವಾರ ಹರಿದಾಡಿತ್ತು.