ನವದೆಹಲಿ, ಜು 20 (DaijiworldNews/HR): ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆದ ಘಟನೆಯನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಪರಿಗಣಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಮಣಿಪುರ ಘಟನೆಗೆ ಸಂಬಂಧಿಸಿದಂತೆ ನಾವು ಕಾರ್ಯನಿರ್ವಹಿಸಲು ಸರ್ಕಾರಕ್ಕೆ ಸ್ವಲ್ಪ ಸಮಯ ನೀಡುತ್ತೇವೆ, ಅಥವಾ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಇದು ತುಂಬಾ ಆಳವಾಗಿ ವಿಚಲಿತರಾಗುವ ಸಂಗತಿ ಎಂದುಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಟೀಕಿಸಿದ್ದಾರೆ.
ಇನ್ನು ನಿನ್ನೆ ಹೊರಬಂದ ವೀಡಿಯೊದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದು, ಮಾಧ್ಯಮಗಳಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳು ಸಾಂವಿಧಾನಿಕ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಸೂಚಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.
ಸಂವಿಧಾನಾತ್ಮಕ ಪ್ರಜಾಪ್ರಭುತ್ವದಲ್ಲಿ ಮಹಿಳೆಯರನ್ನು ಹಿಂಸಾಚಾರದ ಸಾಧನವಾಗಿ ಬಳಸುವುದು ಸ್ವೀಕಾರಾರ್ಹವಲ್ಲ ಎಂದು ಸಿಜೆಐ ಹೇಳಿದ್ದಾರೆ.