ಬೆಂಗಳೂರು, ಜು 21 (DaijiworldNews/MS):ಈಶಾನ್ಯ ರಾಜ್ಯ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ಬಗ್ಗೆ ದೇಶಾದ್ಯಾಂತ ಆಕ್ರೋಶ ವ್ಯಕ್ತವಾಗಿದ್ದು, ಈ ಘಟನೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಟ್ವೀಟ್ ಮಾದಿರುವ ಕಾಂಗ್ರೆಸ್ , "ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ಜರುಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಇದುವರೆಗೂ ಅಲ್ಲಿಗೆ ಭೇಟಿ ನೀಡಬೇಕೆಂದು ಮನಸಾಗಲಿಲ್ಲ. ಮಣಿಪುರದ ಬಗ್ಗೆ ತುಟಿ ಬಿಚ್ಚಲು ಅತ್ಯಂತ ಹೇಯ ಕೃತ್ಯ ನಡೆಯಬೇಕಾಯ್ತುಗಲಭೆಗಳಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಂಡ ಮೋದಿಯವರಿಗೆ ಇದೆಲ್ಲಾ ಸಹಜ ಎನ್ನಿಸುತ್ತಿರಬಹುದೇ? ಎಂದು ಟೀಕಿಸಿದೆ.
ಹಿಂಸಾಚಾರ ಪೀಡಿತ ಮಣಿಪುರದ ಕಾಂಗ್ಪೊಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಮಹಿಳೆಯರ ಮೇಲೆ ಅತ್ಯಾಚಾರ ಕೂಡ ಮಾಡಲಾಗಿದೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.