ವಾರಾಣಸಿ, ಜು 21 (DaijiworldNews/AK): ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆಯ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸಮೀಕ್ಷೆಯನ್ನು ನಡೆಸುವಂತೆ ಜಿಲ್ಲಾ ನ್ಯಾಯಾಲಯ ಸೂಚಿಸಿದೆ.
ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಈ ಕುರಿತು ಪ್ರತಿಕ್ರಿಯಿಸಿ ,ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ನನ್ನ ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ತಿಳಿಸಲಾಗಿದೆ, ನ್ಯಾಯಾಲಯವು ಜ್ಞಾನವಾಪಿ ಮಸೀದಿ ಸಂಕೀರ್ಣದ ವಾಜು ಟ್ಯಾಂಕ್ ಅನ್ನು ಹೊರತುಪಡಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸಮೀಕ್ಷೆಯನ್ನು ನಡೆಸುವಂತೆ ಸೂಚಿಸಿದೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಮೇ ತಿಂಗಳಲ್ಲಿ, ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಸಂಪೂರ್ಣ ಜ್ಞಾನವಾಪಿ ಮಸೀದಿ ಆವರಣವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆಗೆ ಕೇಳಲು ನ್ಯಾಯಾಲಯ ಸಮ್ಮತಿಸಿತ್ತು. ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿತ್ತು.
ವಿಷ್ಣು ಜೈನ್ ಅವರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಹಿಂದೂ ಪರವಾಗಿ ಮಾಡಿದ ಸಲ್ಲಿಕೆಗಳಿಗೆ ಉತ್ತರವನ್ನು ಸಲ್ಲಿಸುವಂತೆ ಜ್ಞಾನವಾಪಿ ಮಸೀದಿ ಸಮಿತಿಯನ್ನು ಕೇಳಿದೆ. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಕಾರ್ಬನ್ ಡೇಟಿಂಗ್ ಕುರಿತ ತೀರ್ಪು ನೀಡಿದೆ.