ನವದೆಹಲಿ, ಜು 22 (DaijiworldNews/HR): ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕೆನಡಾ ಭಾರತೀಯ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಅವರಿಗೆ ಖಲಿಸ್ತಾನು ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಚು ರೂಪಿಸಿದ್ದಾರೆಂದು ಆರೋಪಿಸಿ ನಿಷೇಧಿತ ಸಿಖ್ ಫಾರ್ ಜಸ್ಟಿಸ್ ಸಂಘಟನೆ ಉಗ್ರ ಜಿಎಸ್ ಪನ್ನು ಬೆದರಿಕೆಯೊಡ್ಡಿದ್ದಾನೆ ಎಂದು ತಿಳಿದು ಬಂದಿದೆ.
ಕಳೆದ ಜೂನ್ ನಲ್ಲಿ ವ್ಯಾಂಕೋವರ್ ನಲ್ಲಿ ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದದು, ಇಂದು ಬಿಡುಗಡೆಯಾದ ವೀಡಿಯೊದಲ್ಲಿ, ಮೂವರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡುವವರಿಗೆ 125000 ಯುಎಸ್ ಡಾಲರ್ ಬಹುಮಾನ ನೀಡುವುದಾಗಿ ಜಿಎಸ್ ಪನ್ನು ಘೋಷಿಸಿದ್ದಾನೆ.
ಯುಎಸ್ ಮತ್ತು ಕೆನಡಾದ ಅವಳಿ ಪಾಸ್ಪೋರ್ಟ್ ಗಳನ್ನು ಹೊಂದಿರುವ ಪನ್ನು, ಅಂತರ-ಗ್ಯಾಂಗ್ ವಾರ್ ನಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ನಿಜ್ಜರ್ ಗೆ ಅಂತಾರಾಷ್ಟ್ರೀಯ ಕಾನೂನುಗಳ ಅಡಿಯಲ್ಲಿ ಈ ಮೂವರನ್ನು ಹೊಣೆಗಾರರನ್ನಾಗಿ ಮಾಡುವುದಾಗಿ ಬೆದರಿಕೆ ಹಾಕಿದರು.