ದಾವಣಗೆರೆ, ಜು 25 (DaijiworldNews/MS): ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಮೃತ ಮಗುವನ್ನು ಕೆಂಚಪ್ಪ ಹಾಗೂ ಲಕ್ಷ್ಮಿದೇವಿ ಅವರ ಪುತ್ರಿ ಸ್ಪೂರ್ತಿ ಎಂದು ಗುರುತಿಸಲಾಗಿದೆ. ಘಟನೆಯಿಂದ ಸ್ಫೂರ್ತಿ ತಂದೆ ಕೆಂಚಪ್ಪಗೆ ಗಾಯವಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಅವರು ಅಪಾಯದಿಂದ ಪಾರಾಗಿದ್ದಾರೆ.
ನಿರಂತರ ಮಳೆ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಸಂಪೂರ್ಣವಾಗಿ ಹಾಳಾಗಿದ್ದು, ಜು. 24ರ ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಮನೆಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.