ಬೆಂಗಳೂರು, ಜು 28 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಇಂದು ಕರ್ನಾಟಕ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದೆ.
ಸಿದ್ದರಾಮಯ್ಯ ವಿರುದ್ದ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ.
ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ. ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರು ಸಂವಿಧಾನದ ನಿಬಂಧನೆ, ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.