ಬೆಂಗಳೂರು, ಜು 29 (DaijiworldNews/MS): ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ.
ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಈ ಪಟ್ಟಿಯಲ್ಲಿ ಸಿ.ಟಿ. ರವಿ ಹೆಸರು ಕೈಬಿಡಲಾಗಿದೆ. ಇದರೊಂದಿಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಇಂಬು ಸಿಕ್ಕಂತಾಗಿದೆ.
ಇನ್ನು ೮ ಮಂದಿ ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಕರ್ನಾಟಕ ಚುನಾವಣೆಯ ವಿಚಾರದಲ್ಲಿ ಹಲವು ಆರೋಪಗಳಿಗೆ ಒಳಗಾಗಿದ್ದ ಬಿ.ಎಲ್. ಸಂತೋಷ್ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ