ಗಾಂಧೀನಗರ, ಜು 30 (DaijiworldNews/HR): 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿರುವ ಘಟನೆ ಗುಜರಾತ್ನ ಅಹಮದಾಬಾದ್ ನಗರದಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ನೆಲಮಾಳಿಗೆಯಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ವಸ್ತುಗಳಿಗೆ ಬೆಂಕಿ ತಗುಲಿ ಭಾರೀ ಹೊಗೆ ಉಂಟಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇನ್ನು ನಗರದ ಸಾಹಿಬಾಗ್ ಪ್ರದೇಶದಲ್ಲಿರುವ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಳಗಿನ ಜಾವ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ತಂಡಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.