ಬೆಳಗಾವಿ, ಜು 30 (DaijiworldNews/HR): ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯದ 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ ಎಂದು ಆರೋಪಿಸಿದ್ದಾರೆ.
ಇನ್ನು ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ. ಪರಿಹಾರ ಕೊಡಬೇಕು, ಅದನ್ನು ಇದುವರೆಗೂ ನೀಡಿಲ್ಲ. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ, ಸರ್ಕಾರ ಇದನ್ನು ಗಮನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.