ನವದೆಹಲಿ, ಜು 31 (DaijiworldNews/HR): ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ವರದಿಯಾಗಿದೆ.
ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ.
ಇನ್ನು ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿದ್ದು, ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅವರ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯ ನಂತರ, ಸಿಬಿಐ ನಂತರ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತು.
2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು.