ಬೆಂಗಳೂರು, ಆ 3 (DaijiworldNews/HR): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕರಕ್ಕೆ ಬಂದಾಗಿನಿಂದ ಅನೇಕ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಮತ್ತೆ ರಾಜ್ಯ ಸರ್ಕಾರ, ಗೃಹ ಇಲಾಖೆಯಲ್ಲಿ ಮತ್ತೊಂದು ಸುತ್ತಿನ ವರ್ಗಾವಣೆ ಮಾಡಿದೆ.
ಇತ್ತೀಚೆಗೆ 211 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದ್ದು, ಇಂದು(ಆಗಸ್ಟ್ 03) ಮತ್ತೆ 50 ಪಿಎಸ್ಐಗಳನ್ನು ವರ್ಗಾವಣೆಗೊಳಿಸಲಾಗಿದೆ.
ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆಯನ್ನು ಆರಂಭಿಸಿದೆ ಎಂದು ವಿಪಕ್ಷಗಳು ಗಂಭೀರ ಆರೋಪಗಳನ್ನು ಮಾಡುತ್ತಿವೆ.