ಅಲಹಾಬಾದ್, ಆ 3 (DaijiworldNews/HR): ಜ್ಞಾನವಾಪಿ ಮಸೀದಿ ಆವರಣದಲ್ಲಿ ಪುರಾತತ್ವ ಇಲಾಖೆ ಸಮೀಕ್ಷೆ ನಡೆಸಲು ಇದೀಗ ಅಲಹಾಬಾದ್ ಉಚ್ಛ ನ್ಯಾಯಾಲಯವು ಗ್ರೀನ್ ಸಿಗ್ನಲ್ ನೀಡಿದೆ.
ಅಂಜುಮನ್ ಇಂತೆಜಾಮಿಯಾ ಮಸೀದಿ ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವಾಗಿ ಸರ್ವೆ ಕಾರ್ಯ ನಡೆಯಲಿ ಎಂದಿದೆ.
ಇನ್ನು ನ್ಯಾಯದ ಹಿತಾಸಕ್ತಿಯಿಂದ ಮಸೀದಿ ಆವರಣದ ಸರ್ವೆ ನಡೆಸುವುದು ಅವಶ್ಯಕ ಎಂದು ತೀರ್ಪಿನಲ್ಲಿ ಪೀಠ ಅಭಿಪ್ರಾಯಪಟ್ಟಿದೆ. ಒಂದಿಷ್ಟು ಷರತ್ತಿನಡಿ ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ.
ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಉತ್ತರ ಪ್ರದೇಶದ ಡಿಸಿಎಂ ಕೇಶವ ಪ್ರಸಾದ್ ಮೌರ್ಯ, ನಾನು ಈ ತೀರ್ಪನ್ನು ಸ್ವಾಗತ ಮಾಡುತ್ತೇನೆ. ಸತ್ಯ ಹೊರಬರಲಿದೆ ಎಂಬ ವಿಶ್ವಾಸವಿದೆ. ಪುರಾತತ್ವ ಇಲಾಖೆಯ ಸರ್ವೆ ಬಳಿಕ ಜ್ಞಾನವಾಪಿ ವಿವಾದ ಅಂತ್ಯವಾಗಲಿದು ಹೇಳಿದ್ದಾರೆ.