ಬೆಂಗಳೂರು, ಆ 05 (DaijiworldNews/MS): ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು. ಆ ತೀರ್ಪಿಗೆ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ನೀಡಿದೆ. ರಾಹುಲ್ ಗಾಂಧಿಯವರ ಲೋಕ ಸಭಾ ಸದಸ್ಯತ್ವ ಮುಂದುವರೆಯುವ ರೀತಿಯಲ್ಲಿ ನ್ಯಾಯಾಲಯ ತೀರ್ಪು ನೀಡಿದೆ. ಈ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು ಕಾನೂನನ್ನು ಎತ್ತಿಹಿಡಿಯುವ ಗೌರವಿಸುವ ಕೆಲಸವನ್ನು ಸುಪ್ರೀಂ ಕೋರ್ಟ್ ಮಾಡಿದೆ ಎಂದರು.