ಕಲಬುರಗಿ, ಆ 05 (DaijiworldNews/AK):ರಾಜ್ಯ ಸರ್ಕಾರದ 5ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಇಂದು ಅಧಿಕೃತವಾಗಿ ಚಾಲನೆ ನೀಡಿದರು.
ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಚಾಲನೆ ನೀಡಿದ್ದಾರೆ
ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ 10 ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ವಿತರಣೆ ಮಾಡಲಾಯಿತ್ತು. ಮೊದಲ ತಿಂಗಳಲ್ಲಿ 1.42 ಕೋಟಿ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆಯಲಿದೆ. ಜುಲೈ 27ಕ್ಕೆ ಮೊದಲು ಅರ್ಜಿ ಸಲ್ಲಿಸಿದವರಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ವಿನಾಯಿತಿ ಸಿಗಲಿದೆ.
ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರಿಗೆ ಆಗಸ್ಟ್ ನಲ್ಲಿ ಪ್ರಯೋಜನ ಸಿಗಲಿದೆ. ಜುಲೈ ತಿಂಗಳಿನಲ್ಲಿ ನಿಗದಿತ ವಿದ್ಯುತ್ ಬಳಕೆ ಮಾಡಿದ ಗೃಹಬಳಕೆ ಗ್ರಾಹಕರಿಗೆ ಆಗಸ್ಟ್ 1ರಿಂದ ಶೂನ್ಯ ಬಿಲ್ ವಿತರಣೆಯಾಗಲಿದೆ. ಜುಲೈ 1 ರಿಂದ ಬಳಕೆಯಾದ ಗೃಹಬಳಕೆ ವಿದ್ಯುತ್ ಗೆ ಗ್ರಾಹಕರು ಕಳೆದ ಒಂದು ವರ್ಷದ ಸರಾಸರಿ ವಿದ್ಯುತ್ ಬಳಕೆ ಆಧರಿಸಿ ಅದಕ್ಕಿಂತ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಉಚಿತವಾಗಿ ಪಡೆದುಕೊಳ್ಳಬಹುದು.ಜುಲೈ 27ರೊಳಗೆ ನೋಂದಾಯಿಸಿದ ಗ್ರಾಹಕರಿಗೆ ಈ ಸೌಲಭ್ಯ ಸಿಗಲಿದೆ.