ಬೆಂಗಳೂರು, ,ಆ 05 (DaijiworldNews/AK):ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನಿಯೋಜಿಸಲಾಗಿತ್ತು.
ಪ್ರವೀಣ್ ಸೂದ್ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.