ಬೆಂಗಳೂರು, ಆ 06 (DaijiworldNews/AK): ಬಿಜೆಪಿ ಬರೀ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಗೆ ಆಸ್ಕರ್ ಪ್ರಶಸ್ತಿ ಕೊಡಬಹುದು.ನರೇಂದ್ರ ಮೋದಿ ಸರ್ಕಾರ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಬೆಲೆ ಏರಿಕೆ ಮಾಡಿ ನರಕ ತೋರಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ 15 ಲಕ್ಷ ಹಣ ಪ್ರತಿಯೊಬ್ಬರ ಖಾತೆಗೆ ಕೊಡುತ್ತೇವೆ ಎಂದು ಕೊಡಲಿಲ್ಲ. ನಮ್ಮ ಸರ್ಕಾರ ಬಂದರೆ ರೈತರಿಗೆ ಡಬಲ್ ಹಣ ಮಾಡುತ್ತೇವೆ ಎಂದು ಏನೂ ಮಾಡಲಿಲ್ಲ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ದೇಶದ ಜನ ಬದಲಾವಣೆ ಬಯಸಿದ್ದು, ಈ ಬಾರಿ ದೇಶದಲ್ಲಿ ಇಂಡಿಯಾ ಅಧಿಕಾರಕ್ಕೆ ಬರುಲಿದೆ. ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ಗುರಿ ಇದೆ. ಈಗಾಗಲೇ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂದು ನಿರ್ಧಾರ ಆಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ ರೀತಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು. ಇದಕ್ಕೆ ಕೆಲಸ ಮಾಡುತ್ತೇವೆ ಎಂದರು.