ಬೆಂಗಳೂರು, ಆ 07 (DaijiworldNews/MS): ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ವಿದೇಶ ಪ್ರವಾಸದಲ್ಲಿದ್ದಾಗ ಸ್ಪಂದನಾ್ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ, ಹಾಗೂ ಬೆಳ್ತಂಗಡಿಯಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ವಿಧಾನಸಭೆಗೆ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿಯಾಗಿರುವ ಸ್ಪಂದನಾ ಅವರು, ವಿಜಯ ರಾಘವೇಂದ್ರ ಅವರನ್ನು 2007 , ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು.
ಬ್ಯಾಂಕಾಕ್ ಗೆ ಪ್ರವಾಸಕ್ಕೆ ತೆರಳಿದ ಸಂದರ್ಭ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸ್ಪಂದನಾ ಅವರ ಪಾರ್ಥಿವ ಶರೀರವನ್ನು ನಾಳೆ ಬೆಂಗಳೂರಿಗೆ ತರಲಾಗುತ್ತದೆ ಎಂದು ತಿಳಿದು ಬಂದಿದೆ.