ಬೆಂಗಳೂರು, ಆ 07 (DaijiworldNews/MS): ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.
ಟ್ವೀಟ್ ಮೂಲಕ ದಿಗ್ಭ್ರಮೆ ವ್ಯಕ್ತಪಡಿಸಿರುವ ಸಿಎಂ, 'ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ನನಗೆ ತೀವ್ರ ಆಘಾತವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಕಂಬನಿ ಮಿಡಿದಿದ್ದಾರೆ.
ಇನ್ನು ಸ್ಪಂದನಾ ರಾಘವೇಂದ್ರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶೋಕ ವ್ಯಕ್ತ ಪಡಿಸಿದ್ದಾರೆ.
ಸ್ಪಂದನಾ ಅವರು ಬ್ಯಾಂಕಾಕ್ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಡಿಕೆಶಿ, ವಿಜಯ ರಾಘವೇಂದ್ರ ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ.