ಬೆಂಗಳೂರು, ಆ 07 (DaijiworldNews/MS): ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ಕ್ಯಾಶ್ ಆಯಂಡ್ ಕ್ಯಾರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ಕ್ಯಾಶ್ ಆಯಂಡ್ ಕ್ಯಾರಿ. ಅಧಿಕಾರಿಗಳಿಗೆ ಹಣಕ್ಕಾಗಿ ಎಷ್ಟು ಕಾಡಿರಬೇಕು ಇವರು? ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ದ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸಹಾಯಕ ಕೃಷಿ ನಿರ್ದೇಶಕರು. ಒಬ್ಬಬ್ಬರಿಗೂ 6-8 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದಾರೆ, ನಾವು ಆತ್ಮಹತ್ಯೆ ಮಾಡಿಕೊಳ್ಳದೆ ದಾರಿಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹೊರತುಪಡಿಸಿ ಇನೇನು ನಡೆಯುತ್ತಿಲ್ಲ' ಎಂದು ಹೇಳಿದ್ದಾರೆ
ಮತ್ತೊಂದು ಟ್ವೀಟ್ನಲ್ಲಿ, 'ಸಿದ್ದರಾಮಯ್ಯನವರ ಸರ್ಕಾರದಲ್ಲಿ ವರ್ಗಾವಣೆಗಳು ಬಹಳ ಸುಲಭವಾಗಿದೆ ಕ್ಯಾಶ್ ಆಯಂಡ್ ಕ್ಯಾರಿ, ಈಗ ಪೊಲೀಸ್ ಇಲಾಖೆಯಲ್ಲಂತೂ ವರ್ಗಾವಣೆಯ ಸುಗ್ಗಿ ನಡೆಯುತ್ತಿದೆ. ಸರ್ವರಿಗೂ ಸಮಪಾಲು ಪಾಲಿಸಿರುವ ಮಾನ್ಯ ಮುಖ್ಯಮಂತ್ರಿಗಳು',ಪೊಲೀಸ್ ಇನ್ಸ್ಪೆಕ್ಟರ್ವರೆಗೂ ಶಾಸಕರ ಶಿಫಾರಸ್ಸುಗಳು ಮಾತ್ರ ಪರಿಗಣಿಸುವುದು! ಡಿವೈಎಸ್ಪಿ ವರ್ಗಾವಣೆಗಳು ಮಾನ್ಯ ಗೃಹ ಮಂತ್ರಿಗಳು ಹಾಗು ಮುಖ್ಯಮಂತ್ರಿಗಳದ್ದೇ ಮೇಲುಗೈ!ಕೆಎಸ್ಆರ್ಪಿ ಗೆಸ್ಟ್ ಹೌಸ್ನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಯಷ್ಟೇ ಪವರ್ ಫುಲ್ ವ್ಯಕ್ತಿಯೊಬ್ಬರಿದ್ದರಂತೆ. ಬೆಂಗಳೂರಿನ ಕೆಲವು ಎಸಿಪಿ ವರ್ಗಾವಣೆಯಲ್ಲಿ ಅವರದ್ದೇ ಮೇಲುಗೈ! ಪೊಲೀಸ್ ಎಸ್ಟಾಬ್ಲಿಶ್ಮೆಂಟ್ ಬೋರ್ಡ್ ಈಗ ಪಿಎಸ್ವೈ ಬೋರ್ಡ್ ಆಗಿದೆ" ಎಂದು ಆರೋಪಿಸಿದ್ದಾರೆ.