ಪಂಜಾಬ್, ಆ 07 (DaijiworldNews/HR): ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುತ್ತೇನೆ ಎಂದು ಪಂಜಾಬ್ ಗವರ್ನರ್ ಬನ್ವಾರಿ ಲಾಲ್ ಪುರೋಹಿತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವು ದಿನಗಳಿಂದ ಪಂಜಾಬ್ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವೆ ಒಂದಲ್ಲ ಒಂದು ವಿಷಯಕ್ಕೆ ಒಳಜಗಳ ಉಂಟಾಗುತ್ತಿದ್ದು, ಈ ಹಿಂದೆ ಪರೋಕ್ಷವಾಗಿ ಒಬ್ಬರನ್ನೊಬ್ಬರು ದೂರುತ್ತಿದ್ದರು, ಇದೀಗ ನೇರ ನೇರ ವಾಗ್ದಾಳಿ ನಡೆಸುತ್ತಿದ್ದಾರೆ.
ಇನ್ನು ಸಿಎಂ ಮತ್ತು ರಾಜ್ಯಪಾಲರ ನಡುವೆ ನಡೆಯುತ್ತಿರುವ ವಿವಾದದಿಂದಾಗಿ ಪಂಜಾಬ್ ವಿಧಾನಸಭೆಯಲ್ಲಿ ಅಂಗೀಕಾರವಾದ ವಿಧೇಯಕಗಳು ರಾಜ್ಯಪಾಲರಿಂದ ಅಂಗೀಕಾರವಾಗಿಲ್ಲ ಎಂದು ಹೇಳಲಾಗಿದೆ.