ಬೆಂಗಳೂರು, ಆ 08 (DaijiworldNews/HR): ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ.
ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ.
ಇನ್ನು ಈ ವೇಳೆ ಬಾಂಗ್ಲಾದ ಮೂವರು ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಮಾಹಿತಿ ಪತ್ತೆಯಾಗಿದ್ದು, ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್, ಮೊಹಮ್ಮದ್ ಜಾಹಿದ್ ಎನ್ನುವವರನ್ನು ಎನ್ಐಎ ಅಧಿಕಾರಿಗಳು ಹಿಡಿದು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ.