ಬೆಂಗಳೂರು,ಆ 09 (DaijiworldNews/AK):ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ ಕಳೆದಿಲ್ಲ ಆಗಲೇ ಕಂಟ್ರಾಕ್ಟ್ ಕಮೀಷನ್, ವರ್ಗಾವಣೆ ವ್ಯಾಪಾರದ ಹೊಲಸು ಮೈಗೆಲ್ಲಾ ಮೆತ್ತಿಸಿಕೊಳ್ಳುತ್ತಿದೆ.
ಬಿಜೆಪಿ ಸರ್ಕಾರದ ಮೇಲೆ ಪರ್ಸೆಂಟೇಜ್ ಆರೋಪ ಹೊರಿಸುತ್ತಿದ್ದ ಕಾಂಗ್ರೆಸ್ಸಿಗರು ಇದೀಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.