ಬೆಂಗಳೂರು, ಆ 11(DaijiworldNews/MS): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯೂ ಪೋಸ್ಟರ್ ವಾರ್ ಮುಂದುವರಿಸಿದ್ದು, ಈ ಮೂಲ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ಗೆ ಇರಿಸುಮುರಿಸು ಮಾಡಲು ನಿರ್ಧರಿಸಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಬಿಜೆಪಿಯು, ಕರ್ನಾಟಕ ಕಾಂಗ್ರೆಸ್ ಎಟಿಎಂ ಸರ್ಕಾರ್ ಎಂಬ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ.
ಕರ್ನಾಟಕ ಕಾಂಗ್ರೆಸ್ ಎಟಿಎಂ ಸರ್ಕಾರ್ ಎಂಬ ಒಂದು ಪೋಸ್ಟರ್ನಲ್ಲಿ ಉಪ ಮುಖ್ಯಮಂತ್ತಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಗುತ್ತಾ ಎಟಿಎಂನಿಂದ ಹಣ ತೆಗೆಯುತ್ತಿರುವಂತೆ ಚಿತ್ರಿಸಲಾಗಿದೆ.
ಇನ್ನೊಂದರಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೂಟ್ಕೇಸ್ ಹಿಡಿದುಕೊಂಡಿದ್ದರೆ, ಅವರ ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಖುಷಿಯಿಂದ ಇರುವ ರೀತಿಯಲ್ಲಿ ಚಿತ್ರಿಸಲಾಗಿದೆ.