ಹೊಸದಿಲ್ಲಿ, ಆ 11 (DaijiworldNews/AK): ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಇಂದು ಸುಪ್ರೀಂ ಕೋರ್ಟ್ ಎರಡು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನವಾಬ್ ಮಲಿಕ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿರುವ ಸುಪ್ರೀಂಕೋರ್ಟ್ “ವೈದ್ಯಕೀಯ ಕಾರಣದ ಮೇಲೆ ಜಾಮೀನು ನೀಡಿ ಆದೇಶಿಸಿದ್ದೇವೆ ಎಂದು ಹೇಳಿದೆ.
ನವಾಬ್ ಮಲಿಕ್ ಅವರ ಒಂದು ಕಿಡ್ನಿ ಸಂಪೂರ್ಣ ವಿಫಲವಾಗಿದೆ. ಅವರು ಮೂತ್ರಪಿಂಡ ಕಾಯಿಲೆಗಳಿಂದ ಆಸ್ಪತ್ರೆಯಲ್ಲಿದ್ದಾರೆ ಎಂದು ಮಲಿಕ್ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡನೆ ಮಾಡಿದ್ದರು. ನಿಗದಿತ ಅವಧಿಗೆ ವೈದ್ಯಕೀಯ ಆಧಾರದ ಮೇಲೆ ನೀಡಲಾದ ಜಾಮೀನಿಗೆ ನಮ್ಮ ಆಕ್ಷೇಪವಿಲ್ಲʼ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ. ವಾದ ಆಲಿಸಿದ ಸುಪ್ರೀಂ ಕೋರ್ಟ್ ನವಾಬ್ ಮಲಿಕ್ಗೆ ಎರಡು ತಿಂಗಳ ಅವಧಿಗೆ ಜಾಮೀನು ನೀಡಿದೆ.
ಪರಾರಿಯಾದ ಭಯೋತ್ಪಾದಕ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ನಾಯಕನನ್ನು ಫೆಬ್ರವರಿ 2022 ರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.