ಮಂಡ್ಯ,ಏ07:ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿಯವರನ್ನು ಬೆಂಬಲಿಸಲು ಕೆಲವು ಕಾಂಗ್ರೆಸ್ ನಾಯಕರು ನಿರಾಕರಿಸಿದ್ದು, ಈ ಹಿನ್ನಲೆ ಭಿನ್ನಮತ ಶಮನಗೊಳಿಸಲು ಮಾಜಿ ಸಿಎಂ ಇಂದು ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದಾರೆ.
ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರ ಸ್ವಾಮಿ ಸೇರಿದಂತೆ ಮಂಡ್ಯದ ಪ್ರಮುಖ ಕಾಂಗ್ರೆಸ್ ಮುಖಂಡರೊಂದಿಗೆ ಭಾನುವಾರ ಬೆಳಗ್ಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಜಮೀರ್ ಅಹಮದ್ ಖಾನ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಅಸಮಾಧಾನಿತರು ನಮ್ಮನ್ನು ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡು ಮಾತನಾಡಿಲ್ಲ, ಅವರೇ ನಮ್ಮ ಜತೆ ಮಾತನಾಡಲಿ ಅಂತ ಬೇಡಿಕೆ ಇಟ್ಟಿದ್ದಾರೆ. ಹಾಗಾಗಿ ಇಂದು ಸಿಎಂ ಭೇಟಿಮಾಡಿಸುವ ಜವಾಬ್ದಾರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮತ್ತು ಜಮೀರ್ ಅಹಮದ್ಗೆ ವಹಿಸಲಾಗಿದೆ ಎನ್ನಲಾಗಿದೆ.