ಬೆಂಗಳೂರು, ಆ 12 (DaijiworldNews/MS): ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ವುಡ್ ನಟ ವೀರೇಂದ್ರ ಬಾಬು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವೀರೇಂದ್ರ ಬಾಬು ಮಹಿಳೆಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಅಲ್ಲದೇ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದರು.15 ಲಕ್ಷ ರೂ ಹಣ ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎನ್ನಲಾಗಿದೆ. ಅಂದು ಒಡವೆ ಮಾರಿ ಹಣ ನೀಡಿದ ಬಳಿಕ ಸುಮ್ಮನಾಗಿದ್ದ ಎನ್ನಲಾಗಿದೆ.
ಆದರೆ ಕಳೆದ ಜುಲೈ 30ರಂದು ಮತ್ತೆ ಮಹಿಳೆಯನ್ನು ವೀರೇಂದ್ರ ಬಾಬು ಕರೆಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಕಾರಿನಲ್ಲಿ ತಮ್ಮನ್ನು ಸುತ್ತಾಡಿಸಿ, ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿರುವ ಆರೋಪವನ್ನು ಮಹಿಳೆ ಮಾಡಿದ್ದು ಗನ್ ಇಟ್ಟು ಬೆದರಿಸಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.
ಘಟನೆ ಸಂಬಂಧ ಮಹಿಳೆ ದೂರು ದಾಖಲಿಸಿದ್ದು, ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಕೊಡಿಗೆಹಳ್ಳಿ ಪೊಲೀಸರು ಅರೋಪಿ ವೀರೇಂದ್ರ ಬಾಬು ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.