ಚೆನ್ನೈ, ಆ 13 (DaijiworldNews/HR): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ತೋಡಾ ಸಮುದಾಯದ ಸದಸ್ಯರನ್ನು ಭೇಟಿ ಮಾಡಿ ಅವರೊಂದಿಗೆ ನೃತ್ಯ ಮಾಡಿದ್ದಾರೆ.
ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳದ ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ ಬಳಿಕ ಅವರ ಸಾಂಪ್ರದಾಯಿಕ ಆಹಾರವನ್ನೂ ಸವಿದಿದ್ದಾರೆ.