ಬೆಂಗಳೂರು,ಏ08(AZM): ಲೋಕಸಭೆ ಚುನಾವಣೆಯಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಒಂದು ಟಿಕೆಟ್ ಕೂಡ ನೀಡಿಲ್ಲ ಅನ್ನುವ ಕಾರಣಕ್ಕಾಗಿ ಮಾಜಿ ಸಂಸದ ಹೆಚ್ ಟಿ ಸಾಂಗ್ಲಿಯಾನ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ
ಈ ಮೂಲಕ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಲಾಗಿದೆ
ರಾಜ್ಯದ 28 ಕ್ಷೇತ್ರಗಳಲ್ಲೊ ಒಂದರಲ್ಲೂ ಕ್ರಿಶ್ಚಿಯನ್ ಸಮುದಾಯಕ್ಕೆ ಟಕೆಟ್ ನೀಡಿದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.