ಬೆಂಗಳೂರು, ಆ 14 (DaijiworldNews/HR): ಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ವಿರುದ್ಧ ಎಫ್ಐಆರ್ ಕೇಸ್ ದಾಖಲಾಗಿದ್ದು, ಇದೀಗ ತಮ್ಮ ಮೇಲೆ ಎರಡು ಕಡೆ ದಾಖಲಾಗಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನಾವು ಆಡಿದ ಮಾತಿನ ಬಗ್ಗೆ ಈಗಾಗಲೇ ಕ್ಷಮೆ ಕೇಳಿ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಿಂದಲೇ ಡಿಲಿಟ್ ಮಾಡಿದ್ದೇನೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಎರಡು ಕಡೆ ನಟ ಉಪೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದರೆ ಮಂಡ್ಯ ಮತ್ತು ಕೋಲಾರದಲ್ಲೂ ಪೊಲೀಸ್ ಠಾಣೆಗೆ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ.
ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದು, ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.