ಬೆಂಗಳೂರು, ಆ 14 (DaijiworldNews/AK): ಹಳಬರೆಲ್ಲರೂ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನದಿಂದ ಕೆಳಗಿಳಿಯಬೇಕು. ಹೊಸಬರಿಗೆ ಅವಕಾಶ ಮಾಡಿಕೊಡಬೇಕು' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಆಯ್ಕೆ ಮಾಡುವುದು ಹೈಕಮಾಂಡ್ ನಿರ್ಧಾರ. ಆದರೆ ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ಅಲ್ಲದೇ, ಮೊದಲ ಬಾರಿ ಸಚಿವರಾಗಿರುವವರನ್ನು ಹೊರತುಪಡಿಸಿ ಹಳಬರು ಎರಡೂವರೆ ವರ್ಷಕ್ಕೆ ಇಳಿದು ಹೊಸಬರಿಗೆ ಅವಕಾಶ ಕಲ್ಪಿಸಬೇಕು. ಆ ಮೂಲಕ ನಾವು ದೇಶದಲ್ಲಿ ಹೊಸ ಪರಂಪರೆಯನ್ನು ಆರಂಭಿಸಿದಂದಂತಾಗುತ್ತದೆ. ಇದು ನನ್ನ ವೈಯಕ್ತಿಕ ಸಲಹೆ' ಎಂದು ಅವರು ಹೇಳಿದ್ದಾರೆ.