ಬೆಂಗಳೂರು, ಆ 16 (DaijiworldNews/MS): ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ಚಿನ್ನದ ಬಿಸ್ಕೆಟ್ಗಳನ್ನು ವಶಪಡಿಸಿಕೊಂಡಿದ್ದು, ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್ಗಳನ್ನು ಜಪ್ತಿ ಮಾಡಲಾಗಿದೆ.
ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್ಪೋರ್ಟ್ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.
ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.