ನವದೆಹಲಿ, ಆ 16 (DaijiworldNews/AK): ನೆಹರೂ ಸ್ಮಾರಕ ವಸ್ತುಸಂಗ್ರಹಾಲಯವನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಎಂದು ಅಧಿಕೃತವಾಗಿ ಕೇಂದ್ರ ಸರ್ಕಾರ ಮರುನಾಮಕರಣ ಮಾಡಿದೆ.
ವಸ್ತುಸಂಗ್ರಹಾಲಯದ ಉಪಾಧ್ಯಕ್ಷ ಎ. ಸೂರ್ಯ ಪ್ರಕಾಶ್ ಅವರು ಈ ಕುರಿತು ತಮ್ಮ ಟ್ವಿಟ್ಟರ್ (ಎಕ್ಸ್) ಖಾತೆಯಲ್ಲಿ ತಿಳಿಸಿದ್ದಾರೆ. ಆ.14 ರಿಂದ ಅಧಿಕೃತವಾಗಿ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯ ಹೆಸರು ಬದಲಾಗಿದೆ. ಪ್ರಜಾಪ್ರಭುತ್ವೀಕರಣ ಮತ್ತು ವೈವಿಧ್ಯೀಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಸೂರ್ಯ ಪ್ರಕಾಶ್ ತಿಳಿಸಿದ್ದಾರೆ.
ಸಭೆಯೊಂದರಲ್ಲಿ ಈ ವಸ್ತುಸಂಗ್ರಹಾಲಯದ ಹೆಸರು ಬದಲಾವಣೆ ಮಾಡುವ ಕುರಿತು ನಿರ್ಧರಿಸಲಾಗಿತ್ತು. ಸೊಸೈಟಿಯ ಉಪಾಧ್ಯಕ್ಷರಾಗಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.