ಬೆಂಗಳೂರು, ಆ 16 (DaijiworldNews/AK): ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಬಿಜೆಪಿಯಿಂದ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳಿ ಶಾಸಕರು ಬರಬಹುದು.ಹಿಂದೆ ಪಕ್ಷ ಬಿಟ್ಟು ಹೋದವರು ಕೂಡಾ ಬರಬಹುದು ಎಂದು ಸ್ಪಷ್ಟಪಡಿಸಿದರು.
ಪಕ್ಷ ಬಿಟ್ಟು ಹೋದವರು ವಾಪಸ್ ಬಂದಿರೋ ಉದಾಹರಣೆ ಇದೆ. ಆದರೆ ಅವರಿಗೆ ಫಸ್ಟ್ ಬೆಂಚ್ ಸಿಗಲ್ಲ.ತಪ್ಪು ಮಾಡಿದ್ದನ್ನು ಸರಿ ಮಾಡಿಕೊಳ್ತೀವಿ ಎಂದರೆ ಮಾಡಿಕೊಂಡು ಬರಬಹುದು. ಫಸ್ಟ್ ಬೆಂಚ್ ಸಿಗದೇ ಹೋದರೂ ಅವರಿಗೆ ಕ್ಲಾಸ್ ರೂಂಗೆ ಅವಕಾಶ ಇದೆ. ಅವರು ಮತ್ತೆ ಫಸ್ಟ್ ಬೆಂಚ್ ಸಿಗಬೇಕಾದರೆ ತುಂಬಾ ದಿನ ಆಗುತ್ತದೆ ಅಷ್ಟೇ ಎಂದು ಹೇಳಿದರು.