ಬೆಂಗಳೂರು, ಆ 16 (DaijiworldNews/AK):ಲೋಕಸಭಾ ಚುನಾವಣೆ ಸಿದ್ದತೆ ಹಿನ್ನಲೆ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು.
ಸಭೆಯಲ್ಲಿ ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ, ಸಂಸದ ಡಿ.ಕೆ ಸುರೇಶ್ ಸೇರಿಂದತೆ ಸಚಿವರು, ಶಾಸಕ ಶಾಸಕರು ಪಾಲ್ಗೊಂಡಿದ್ದರು.
ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, "ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ. ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ, ಪಕ್ದ್ವೇಷ ಸಾಧಿಸಬೇಡಿ, ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆʼʼ ಎಂದು ತಿಳಿಸಿದ್ಧಾರೆ.
ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ, ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ, ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ" ಎಂದು ಅವರು ಹೇಳಿದ್ದಾರೆ.
ಸಭೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.