ಬೆಂಗಳೂರು, ಆ 16 (DaijiworldNews/SM): ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯ ಪ್ರಕಟಿಸಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಪಡಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
"NEP ಅನ್ನು ಸ್ಕ್ರ್ಯಾಪ್ ಮಾಡುವ ಮೊದಲು ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕೆ ಸಮಯಾವಕಾಶ ಸಿಕ್ಕಿರಲಿಲ್ಲ. ಚುನಾವಣೆಯ ನಂತರ ಸರ್ಕಾರ ರಚನೆಯಾದಾಗ, ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು ಎಂದು ಸಿಎಂ ವಿವರಿಸಿದರು.