ಬೆಂಗಳೂರು, ಆ 17 (DaijiworldNews/HR): ಬಿಜೆಪಿಯಿಂದಯಾರೇ ಶಾಸಕರು ಕಾಂಗ್ರೆಸ್ಗೆ ಬಂದರೆ ನಾವು ವಿರೋಧ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸೋಮಶೇಖರ್ ಅವರನ್ನು ನಾನು ಸಂಪರ್ಕ ಮಾಡಿಲ್ಲ. ಆದರೆ ಅವರು ಕಾಂಗ್ರೆಸ್ಗೆ ದುಡಿದವರು. ನಾನು ಕಾಂಗ್ರೆಸ್ ಅಧ್ಯಕ್ಷ ಆಗಿದ್ದಾಗ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಮಾಡಿದ್ದೆ. ಆಗ ಒಳ್ಳೆಯ ಕೆಲಸ ಮಾಡಿದ್ದರು. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದು ಹೇಳುವ ಮೂಲಕ ಸೋಮಶೇಖರ್ ಕಾಂಗ್ರೆಸ್ ಸೇರುವ ಸುಳಿವು ಕೊಟ್ಟಿದ್ದಾರೆ.
ಇನ್ನು ಸೋಮಶೇಖರ್ ಅವರನ್ನು ಕಾಂಗ್ರೆಸ್ ಪಕ್ಷವೂ ಒಳ್ಳೆಯ ರೀತಿಯಲ್ಲಿ ನೋಡಿಕೊಂಡಿತ್ತು. 3 ಬಾರಿ ಕಾಂಗ್ರೆಸ್ನಿಂದ ಶಾಸಕರಾಗಿದ್ದರು. ಅವರು ನಮ್ಮಲ್ಲಿ ಇದ್ದಿದ್ದರೆ ಸಚಿವ ಸ್ಥಾನ ಸಿಗಬಹುದಿತ್ತೇನೋ? ಈಗ ಇರುವ ಪಕ್ಷದಲ್ಲಿ ಬೇಸರ ಆಗಿದೆ ಎನ್ನುವ ಮಾತುಗಳನ್ನು ಅನೇಕ ಬಾರಿ ಹೇಳಿದ್ದಾರೆ ಎಂದರು.