ಬೆಂಗಳೂರು,ಆ 18(DaijiworldNews/AK): ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.
ಅನುಷ್ಠಾನಗೊಳಿಸಿದ ಕಾಮಗಾರಿ, ಯೋಜನೆಗಳ ಗುಣಮಟ್ಟ, ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ,ಅನುಷ್ಠಾನ ಪ್ರಕ್ರಿಯೆಗಳಲ್ಲಿ ಉಂಟಾಗಿರಬಹುದಾದ ಇತರ ಯಾವುದಾದರೂ ಲೋಪದೋಷಗಳು ಸೇರಿದಂತೆ ಎಲ್ಲದರ ಬಗ್ಗೆ ಸಮಿತಿ ತನಿಖೆ ನಡೆಸಲಿದೆ.