ಬೆಂಗಳೂರು, ಆ 18(DaijiworldNews/MS): ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ 'ರಾಷ್ಟ್ರೀಯ ಶಿಕ್ಷಣ ನೀತಿ' ರದ್ದುಪಡಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ ವಿಚಾರವಾಗಿ ಡಿಸಿಎಂ ಡಿ. ಕೆ. ಶಿವಕುಮಾರ್ ಶುಕ್ರವಾರ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ. 'ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ ಮಾತಿಗೆ ನಾವು ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.
ಕರ್ನಾಟಕದಲ್ಲೇ ಮೊದಲು ಎನ್ಇಪಿ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್ಇಪಿ ಜಾರಿ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ. ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆಯ ಸ್ಥಾನದಲ್ಲಿದ್ದಾರೆ. ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದು ಹೇಳಿದ್ದಾರೆ.