ನೆಲಮಂಗಲ, ಎ09(SS): ಪ್ರಧಾನಿ ಮೋದಿ ಶಿಶುಪಾಲನಿದ್ದಂತೆ ರಾಹುಲ್ ಗಾಂಧಿ ಶ್ರೀಕೃಷ್ಣನಿದ್ದಂತೆ, ಹದಿನೆಂಟಕ್ಕೆ ಶಿಶುಪಾಲನ ಅಂತ್ಯವಾಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡ.ಎಂ.ವೀರಪ್ಪ ಮೊಯ್ಲಿ ತಿಳಿಸಿದರು.
ಚುನಾವಣೆ ಪ್ರಚಾರದ ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಪ್ರಧಾನಿಯಾದರೆ ಶ್ರೀಕೃಷ್ಣನಂತೆ ರಾಷ್ಟ್ರವನ್ನು ಸಾಮರಸ್ಯದಿಂದ ಅಭಿವೃದ್ಧಿ ಪಥದಲ್ಲಿ ಮುನ್ನೆಡೆಸುತ್ತಾರೆ ಎಂದು ಹೇಳಿದ್ದಾರೆ.
ಬಡವರ ಉದ್ಧಾರ ಆಗಬೇಕೆಂದರೆ ಕಾಂಗ್ರೆಸ್ಗೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದರೆ ಬಡವರಿಗೆ ಅನುಕೂಲ ವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬಡ ಜನರ ಪರ ಕೆಲಸ ಮಾಡುತ್ತಿಲ್ಲ, ಅವರು ಶ್ರೀಮಂತರ ಪರ ಕೆಲಸ ಮಾಡುತ್ತಿದ್ದಾರೆ. ಈ ದಿನ ನರೇಂದ್ರ ಮೋದಿಯವರ ಸರ್ಕಾರದಿಂದ ಎಲ್ಲಾ ರೀತಿಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಪ್ರಧಾನಿ ಮೋದಿ ಶಿಶುಪಾಲನಿದ್ದಂತೆ ರಾಹುಲ್ ಗಾಂಧಿ ಶ್ರೀಕೃಷ್ಣನಿದ್ದಂತೆ, ಹದಿನೆಂಟಕ್ಕೆ ಶಿಶುಪಾಲನ ಅಂತ್ಯವಾಗುತ್ತದೆ ಎಂದು ತಿಳಿಸಿದರು.
ಸದ್ಯ ಎಲ್ಲೆಡೆ ಲೋಕಸಭಾ ಚುನಾವಣೆಯ ಬಿಸಿ ಕಾವೇರುತ್ತಿದ್ದು, ಪ್ರಚಾರದ ಭರಾಟೆಯೂ ಜೋರಿದೆ. ಮತ್ತೂಂದೆಡೆ ರಾಜಕೀಯ ಪಕ್ಷಗಳ ಮುಖಂಡರಿಂದ ಧಾರ್ಮಿಕ ಕೇಂದ್ರಗಳ ಭೇಟಿಯೂ ಭರ್ಜರಿಯಾಗಿಯೇ ನಡೆಯುತ್ತಿದೆ. ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಮ್ಮ ಎದುರಾಳಿಗಳನ್ನು ಸೋಲಿಸಲು ಹಲವು ತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ.