ವಿಜಯಪುರ,ಆ 18 (DaijiworldNews/AK): ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಯಾವ ಕಾಲಕ್ಕೂ ಸಿಎಂ ಆಗಲ್ಲ. ಇದೀಗ ಡಿಕೆಶಿ ಸೂಪರ್ ಸಿಎಂ ಆಗಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ನ ಕೊನೆಯ ಮುಖ್ಯಮುಖ್ಯಮಂತ್ರಿ ಸಿದ್ದರಾಮಯ್ಯವರೇ ಅವರು ಈಗ ಸುಮ್ಮನೆ ಸಿಎಂ ಹುದ್ದೆಯಲ್ಲಿ ಇದ್ದಾರೆ. ಆದರೆ ಆಡಳಿತ ಮಾತ್ರ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. ಆರು ತಿಂಗಳು ಆಗಲಿ - ಐದು ತಿಂಗಳು ಅಗಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಹೇಳಿದ್ದಾರೆ.