ಬೆಂಗಳೂರು, ಆ 19(DaijiworldNews/MS): ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಖ್ಯಾತಿಯ, ಹಾಗೂ ನಟ , ನಿರೂಪಕ ಕಿರಿಕ್ ಕೀರ್ತಿ ಅವರ ವೈವಾಹಿಕ ಜೀವನ ಬಹಳಷ್ಟು ಸಮಯದಿಂದ ಸುದ್ದಿಯಲ್ಲಿದ್ದ ವಿಚಾರ. ಈಗ ತಮ್ಮ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಅವರು ಗುಡ್ ಬೈ ಹೇಳಿದ್ದಾರೆ.
ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ.
ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು ಮುಂದೆ ಕರಿಮಣಿ ಮಾಲೀಕ ನಾನಲ್ಲ.
ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ. ಕಹಿ ನೆನಪುಗಳು ಮರೆತು ಹೊಸ ಜೀವನಕ್ಕೆ ನಾಂದಿ ಹಾಡಲಿ. ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರೆಯಲಿ ಎಂದು ವೈವಾಹಿಕ ಬದುಕಿನ ಕುರಿತು ತಮ್ಮ ನಿರ್ಧಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಅನೌನ್ಸ್ ಮಾಡಿದ್ದಾರೆ.