ನವದೆಹಲಿ, ಆ 19 (DaijiworldNews/HR): 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿಯಿಂದ ಹಾಗೂ ವಾರಣಾಸಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದರು.
ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸುಮಾರು 55,000 ಮತಗಳ ಅಂತರದಿಂದ ರಾಹುಲ್ ಅವರನ್ನು ಸೋಲಿಸಿದ್ದರು. ಹಾಗಾಗಿ ಈ ಬಾರಿಯ ಚುನಾವಣೆ ಕೂತಹಲ ಮೂಡಿಸಿದೆ.