ಬೆಂಗಳೂರು, ಆ 19 (DaijiworldNews/HR): ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದರು.
ಇನ್ನು ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ.