ಬೀದರ್, ಆ 19 (DaijiworldNews/HR): ಬಾಂಬೆ ಟೀಮ್ನ ಯಾರು ಕೂಡ ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಬಿಜೆಪಿ ಸೇರಿ ನಮ್ಮ ಸರ್ಕಾರದಲ್ಲಿ ಅವರು ಮಂತ್ರಿಯಾಗಿದ್ದಾರೆ. ಅವರಿಗಾಗಿ ನಾವು ಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ್ದೇವು. ಅವರಿಂದ ನಮಗೆ ಮತ್ತು ನಮ್ಮಿಂದ ಅವರಿಗೆ ಯಾವುದೇ ತೊಂದರೆಯಾಗಿಲ್ಲ, ಹಿಗಾಗಿ ಅವರು ಕಾಂಗ್ರೆಸ್ಸಿಗೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದರು.
ಇನ್ನು ವರಿಷ್ಠರು ಅಳೆದು ತೂಗಿ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುತ್ತಿದ್ದಾರೆ. ಶ್ರಾವಣ ಮಾಸ ಮುಗಿಯುವ ಒಳಗಾಗಿ ವಿಪಕ್ಷ ನಾಯಕನ ಆಯ್ಕೆ ಆಗಲಿದೆ. ನನ್ನನ್ನು ವಿರೋಧ ಪಕ್ಷ ನಾಯಕನ ಮಾಡಿದರೂ ಅಷ್ಟೇ, ಇಲ್ಲವಾದರೂ ನನಗೆ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ.