ತಿರುವನಂತಪುರಂ,ಆ 19 (DaijiworldNews/AK): ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಹಂದಿಗಳನ್ನು ಎರಡು ಫಾರ್ಮ್ಗಳಲ್ಲಿ ಕೊಲ್ಲಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಮಲೆಯಂಪಾಡಿನಲ್ಲಿ ಹಂದಿ ಜ್ವರ ಪತ್ತೆಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಟ್ಟಿಸಿದ್ದಾರೆ. ನಂತರ, ಜಿಲ್ಲಾಧಿಕಾರಿಗಳು ಹಂದಿಗಳನ್ನು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದು, ಅದನ್ನು ಶಿಷ್ಟಾಚಾರದ ಪ್ರಕಾರ ಶವಗಳನ್ನು ಹೂಳಲು ಹೇಳಿದ್ದಾರೆ ಎನ್ನಲಾಗಿದೆ.
ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶ ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ವೆಂದು ಘೋಷಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಅಲ್ಲದೇ ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ , ಮಾರಾಟ, ಸಾಗಣೆಯನ್ನು 3 ತಿಂಗಳವರೆಗೆ ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.