ಶಿವಮೊಗ್ಗ, ಆ 19 (DaijiworldNews/AK): ಬಿಜೆಪಿಯ ಯಾವ ಶಾಸಕರು ಕೂಡ ಕಾಂಗ್ರೆಸ್ ಗೆ ಹೋಗುವುದಿಲ್ಲ. ಕಾಂಗ್ರೆಸ್ನವರು ಸುಮ್ಮನೆ ಗುಲ್ ಎಬ್ಬಿಸಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಇರುವ ಮಾಹಿತಿ ಪ್ರಕಾರ ಯಾವ ಶಾಸಕರು ಕಾಂಗ್ರೆಸ್ಗೆ ಹೋಗುವುದಿಲ್ಲ. ಗುತ್ತಿಗೆ ನೌಕರರಿಗೆ ಈ ಸರ್ಕಾರ ಬಂದ ಮೇಲೆ ವೇತನ ಸಹ ಕೊಟ್ಟಿಲ್ಲ ಎಂದು ಆರೋಪಿಸಿದರು.ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಮರೆಮಾಚಲು ಇದನ್ನು ಬೆಳಕಿಗೆ ತಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಜಲಾಶಯಗಳಲ್ಲಿ ನೀರಿಲ್ಲ, ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಇಲ್ಲ. ವಿದ್ಯುತ್ ಉತ್ಪಾದನೆಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ದೂರಿದರು.